
ಮತದಾರ ದಿನವಾದ ಜನವರಿ 25 ರಂದು ಉಡುಪಿಯ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಶಾಲೆಯ ಮತದಾರ ಸಾಕ್ಷರತಾ ಕ್ಲಬ್‍ನ್ನು ಜಿಲ್ಲೆಅತ್ಯುತ್ತಮ ಕ್ಲಬ್ ಎಂದು ಗುರುತಿಸಿ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಕೆ. ಹರ್ಷಿಣಿರವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಇವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಿಂಧು ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಶ್ರೀವಿದ್ಯಾ, ಜಿ.ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
No comments:
Post a Comment