ಸರಕಾರದಿಂದ ಕೊಡಮಾಡುವ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮವು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು. ಅತಿಥಿಗಳಾಗಿ ಶ್ರೀಮತಿ ಮಾಲಿನಿ ಜೆ. ಶೆಟ್ಟಿ-ಅಧ್ಯಕ್ಷರು ತಾಲೂಕು ಪಂಚಾಯತ್ ಕಾರ್ಕಳ, ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಶ್ರೀ ಪ್ರದೀಪ್ ರಾಣೆ-ಸ್ಥಳೀಯ ಪುರಸಭಾ ಸದಸ್ಯರು, ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಶ್ರೀ ಕಾಳಿದಾಸ-ಹಿರಿಯ ಸಹಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಮಾಲಿನಿ ಜೆ. ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಬೈಸಿಕಲನ್ನು ಹಸ್ತಾಂತರಿಸಿದರು. ಶ್ರೀಮತಿ ವೀಣಾ ಎ. ಕಾರ್ಯಕ್ರಮವನ್ನು ನಿರೂಪಿಸಿದರು.
04-02-2019 ಸೋಮವಾರ
No comments:
Post a Comment