Friday, January 25, 2019

ಪೆರ್ವಾಜೆಶಾಲೆಗೆ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಪ್ರಶಸ್ತಿ


ಮತದಾರ ದಿನವಾದ ಜನವರಿ 25 ರಂದು ಉಡುಪಿಯ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಶಾಲೆಯ ಮತದಾರ ಸಾಕ್ಷರತಾ ಕ್ಲಬ್‍ನ್ನು ಜಿಲ್ಲೆಅತ್ಯುತ್ತಮ ಕ್ಲಬ್ ಎಂದು ಗುರುತಿಸಿ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಕೆ. ಹರ್ಷಿಣಿರವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಇವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಿಂಧು ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಶ್ರೀವಿದ್ಯಾ, ಜಿ.ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು







Thursday, January 24, 2019

ನೇತಾಜಿಯವರ ಜನ್ಮ ದಿನಾಚರಣೆ


 
 ದಿನಾಂಕ:-23-01-2019 ಬುಧವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನೇತಾಜಿ ಸುಭಾಸ್‍ಚಂದ್ರ ಭೋಸ್‍ರ 122ನೇ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಮುನಿರಾಜ ರೆಂಜಾಳ-ಮುಖ್ಯೋಪಾಧ್ಯಾಯರು ಜೈನ ಪ್ರೌಢಶಾಲೆ ಮೂಡಬಿದ್ರೆ,  ಶ್ರೀ ಕೃಷ್ಣಕಾಂತ್-ಎ.ಎಸ್.ಪಿ. ಕಾರ್ಕಳ ನಗರ ಪೊಲೀಸ್ ಠಾಣೆ, ಶ್ರೀ ಸುರೇಶ್ ಮಡಿವಾಳ-ಸಂತೂರ್ ಡಿಸ್ಟ್ರಿಬ್ಯೂಟರ್, ಶ್ರೀ ಶೇಕ್ ಮುಸ್ತಾಫ, ಶ್ರೀ ಶಶಿಧರ ಹೆಚ್.-ಆರೋಗ್ಯ ಶಿಕ್ಷಣಾಧಿಕಾರಿಗಳು ಕಾರ್ಕಳ,   ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಎಸ್.ಡಿ.ಎಂ.ಸಿ., ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳು ಮತ್ತು ವಿದ್ಯಾರ್ಥಿಗಳು ನೇತಾಜಿಯವರ ಜೀವನ, ಸ್ವಾತಂತ್ರ್ಯ ಹೋರಾಟ, ಕ್ರಾಂತಿಕಾರಿ ಬದುಕು, ಉದಾತ್ತ ವಿಚಾರಗಳ ಕುರಿತು ಮಾತನಾಡಿದರು.  ವಿದ್ಯಾರ್ಥಿಗಳು ಓದಿದ ಪುಸ್ತಕಗಳ ಅನಿಸಿಕೆಗಳ ಸಂಗ್ರಹ ‘ಸಂಕಲ್ಪ’, ಶಾಲಾ ಮಾಸಿಕ ಪತ್ರಿಕೆ ‘ಗೋಮತಿ’ ಮತ್ತು              7 ತರಗತಿಗಳ ಮಾಸಿಕ ಪತ್ರಿಕೆಗಳನ್ನು ಅನಾವರಣಗೊಳಿಸಲಾಯಿತು. ಉತ್ತಮ ಅನಿಸಿಕೆ ಬರೆದ ವಿದ್ಯಾರ್ಥಿಗಳನ್ನು ಬಹುಮಾನಿಸಲಾಯಿತು. ಸಂತೂರ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ವಿಜೇತರನ್ನು, ಆರೋಗ್ಯ ಇಲಾಖೆ ನಡೆಸಿದ್ದ ಪ್ರಬಂಧ ಸ್ಪರ್ಧೆ ವಿಜೇತರನ್ನು ಬಹುಮಾನಿಸಲಾಯಿತು. ಕು| ರಕ್ಷಿತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕು| ಸಂಧ್ಯಾ ಸರ್ವರನ್ನೂ ವಂದಿಸಿದರು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






Wednesday, January 23, 2019

ಪೆರ್ವಾಜೆ ಶಾಲೆಯ ತರಕಾರಿ ತೋಟ

ಎಲ್ಲ ಸರಕಾರಿ ಶಾಲೆಗಳಲ್ಲೂ ಮದ್ಯಾಹ್ನದ  ಉಚಿತ ಬಿಸಿಯೂಟ ಲಭ್ಯವಿದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.
ಮಧ್ಯಾಹ್ನ ಬಿಸಿಯೂಟ ನೀಡುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 491 (ಅಂದಾಜು) ಕ್ಯಾಲೋರಿ ಹಾಗೂ 13.80 ಗ್ರಾಂ ಪ್ರೋಟೀನನ್ನು, ಉನ್ನತ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 728 (ಅಂದಾಜು) ಕ್ಯಾಲೋರಿ ಮತ್ತು 21 ಗ್ರಾಂ. ಪೋಟೀನನ್ನು ಒಳಗೊಂಡಂತೆ ಪೌಷ್ಠಿಕಾಂಶ ದೊರೆಯುತ್ತಿದೆ.
ಬೇಳೆ/ಕಾಳನ್ನು ಬಳಕೆಯನ್ನು ಕಡ್ಡಾಯಗೊಳಿಸಿದೆ. ಈ ತರಕಾರಿಗಳೊಂದಿಗೆ ಸ್ಥಳೀಯ ಆಹಾರ ಪದ್ಧತಿಯನ್ವಯ ಸ್ಥಳೀಯವಾಗಿ ಬೆಳೆಯುವ ಇತರೆ ತರಕಾರಿ/ ಗೆಡ್ಡೆ/ಗೆಣಸುಗಳನ್ನು ಬಳಸಲು ಪೆರ್ವಾಜೆ ಶಾಲೆಯಲ್ಲಿ ತರಕಾರಿ ತೋಟವನ್ನು ನಿರ್ವಹಿಸಲಾಗುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವೇದಾವತಿಯವರು ಮುಖ್ಯಶಿಕ್ಷಕರ ಮಾರ್ಗದರ್ಶನ ಮತ್ತು ಶಾಲೆಯ ಶಿಕ್ಷಕ ವೃಂದದ ಬೆಂಬಲ ಮತ್ತು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಮೂಲಕ ತರಕಾರಿ ತೋಟವನ್ನು ನಿರ್ವಹಿಸುತ್ತಿದ್ದಾರೆ.















ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ




   12-01-2019 ಶನಿವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಶ್ರೀ ನಂಜ ನಾಯ್ಕ-ಸಬ್‍ಇನ್ಸ್‍ಪೆಕ್ಟರ್ ಕಾರ್ಕಳ ನಗರ ಪೊಲೀಸ್ ಠಾಣೆ ಇವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಾಧನೆ ಮತ್ತು ಆದರ್ಶ ಗುಣಗಳ ಕುರಿತು ತಿಳಿಸಿದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಉದಾತ್ತ ವಿಚಾರಗಳ ಕುರಿತು ಮಾತನಾಡಿದರು. ಕಾರ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಉತ್ತಮವಾಗಿ ಮಾತನಾಡಿದ ಮಕ್ಕಳನ್ನು ಬಹುಮಾನಿಸಲಾಯಿತು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Thursday, January 17, 2019

ವಿಜ್ಞಾನ ರಂಗೋಲಿ

ಹತ್ತನೆಯ ತರಗತಿಯ ವಿಜ್ಞಾನ ಪುಸ್ತಕದಲ್ಲಿರುವ ಪರೀಕ್ಷಾ ಪ್ರಾಮುಖ್ಯತೆಯನ್ನು ಹೊಂದಿರುವ ಚಿತ್ರಗಳನ್ನು ದಿನಕ್ಕೊಂದರಂತೆ ರಂಗೋಲಿ ಹಾಕಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು
ನೀರಿನ ವಿದ್ಯದ್ವಿಭಜನೆ

ಸಸ್ಯದ ಸಂತಾನೋತ್ಪಾದಕ ಭಾಗ

ವಿಸರ್ಜನಾಂಗ ವ್ಯೂಹ

ಪತ್ರರಂದ್ರ

ಹೃದಯ

ಜೀರ್ಣಾಂಗವ್ಯೂಹ

ಪರಾಗದ ಮೊಳಕೆ

ಸಸ್ಯದ ಸಂತಾನೋತ್ಪಾದಕ ಭಾಗ

ಮೆದುಳು

ನ್ಯೂರಾನ್
ಹೃದಯ